ಇತ್ತೀಚಿನ ಸುದ್ದಿ
ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಬಿದ್ದು ಸೆಂಟ್ರಿಂಗ್ ಕಾರ್ಮಿಕ ಸಾವು
19/11/2021, 19:54

ಕುಂದಾಪುರ(reporterkarnataka.com): ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಶುಭಂ ಎಂಬಾತ ನ.17 ರಂದು ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದಿದ್ದ , ಕೂಡಲೇ ಕುಂದಾಪುರ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಸಂಜೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿರುವಾಗ ಫಲಿಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.