9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

7 ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ತರುಣಿ: ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್‌ ಸಭಾದಿಂದ ಎಸ್ಪಿಗೆ ಮನವಿ

19/11/2021, 20:01

ಉಡುಪಿ(reporterkarnataka.com): ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ ಅವರಿಗೆ ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೇರಿ ಡಿʼಸೋಜಾ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿಯಾಗಿರುವ ಅವಿನಾ (16) ಎಂಬ ತರುಣಿ 2021 ಏಪ್ರಿಲ್‌ 13 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಈಗಾಗಲೇ ಆಕೆಯ ಪೋಷಕರು ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಈ ವರೆಗೆ ಆಕೆಯ ಇರುವಿಕೆ ಅಥವಾ ಪತ್ತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ ಆಕೆಯ ಪೋಷಕರು ಆತಂಕಿತರಾಗಿದ್ದಾರೆ. ಆಕೆಯ ಪತ್ತೆಗಾಗಿ ಪೊಲೀಸ್‌ ಇಲಾಖೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದು ಸಂಸ್ಥೆಯ ಗಮನದಲ್ಲಿದ್ದು ಆದಷ್ಟು ಬೇಗ ಆಕೆಯನ್ನು ಪತ್ತೆ ಮಾಡುವ ಮೂಲಕ ನೊಂದ ಕುಟಂಬಕ್ಕೆ ನ್ಯಾಯ ಒದಗಿಸಿ ಕೊಡುವಂತೆ  ಈ ವೇಳೆ ಮೇರಿ ಡಿಸೋಜಾ ಮನವಿ ಮಾಡಿದರು.

ಮನವಿ ಸ್ವೀಕರಿಸಿದ  ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ ಪೊಲೀಸ್‌ ಇಲಾಖೆ ಯುವತಿಯ ಪತ್ತೆಗಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ಕಥೊಲಿಕ್‌ ಸಭಾ ಉಡುಪಿ ಪ್ರದೇಶ್‌ ಇದರ ನಿಯೋಜಿತ ಅಧ್ಯಕ್ಷರಾದ ಸಂತೋಷ್‌ ಕರ್ನೆಲಿಯೋ, ಉಡುಪಿ ವಲಯ ಅಧ್ಯಕ್ಷರಾದ ಶಾಂತಿ ಪಿರೇರಾ, ಉಡುಪಿ ಘಟಕದ ಅಧ್ಯಕ್ಷರಾದ ಲೆಸ್ಲಿ ಕರ್ನೇಲಿಯೋ, ಪೆರಂಪಳ್ಳಿ ಘಟಕದ ಅಧ್ಯಕ್ಷರಾದ ಒಲಿವರ್‌ ಡಿʼಸೋಜಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು