11:45 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

20/11/2021, 15:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com 

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು. ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ದೇಶದ ಅನ್ನದಾತರು ಚಳಿ , ಮಳೆ , ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು . ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ , ಪೊಲೀಸ್ ಬಲ ಪ್ರಯೋಗಿಸಿತ್ತು . ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ನಿಂತರು . ಈ ಹೋರಾಟದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಪಾಣ ತ್ಯಾಗ ಮಾಡಿದ್ದು , ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ . ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ . ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ . ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪಭುತ್ವಕ್ಕೆ ಸಿಕ್ಕ ಗೆಲುವು .

ರೈತರ ಹಿತದೃಷ್ಟಿಯಿಂದ ಜೆಡಿಎಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು . ಕೇಂದ್ರ ಸರ್ಕಾರ ಇನ್ನು ಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿ ಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು . ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ . ಜೆಡಿಎಸ್ ಪಕ್ಷ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ . ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು , ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ . ಇನ್ನುಂದೆ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ ಎಂದೂ ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು