7:05 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

20/11/2021, 20:59

 

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ.

 ನಗರದ ಕರ್ನಾಟ ಬೇಕರಿ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಚೀಟಿ ಬರೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪೋಲಿಸ್ ಇನ್ಸ್‍ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ ದಾಳಿ ನಡೆಸಿ ಕುರಡಿಹಳ್ಳಿ ಗ್ರಾಮದ ಮೂರ್ತಿನಾಯ್ಕ(33) ಹಾಗೂ 770 ರೂ ಹಾಗೂ ಟೌನ್ ರಹೀಂನಗರದ ಶುದ್ದನೀರಿನ ಘಟಕದ ಬಳಿ  ಪಾಪಣ್ಣ(32) 610 ರೂ ಹಾಗೂ  ಮಟ್ಕ ಚೀಟಿಗಳನ್ನು  ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂದನದ ವಶಕ್ಕೆ ನೀಡಲಾಗಿದೆ.

ಮಟ್ಕಾ ದಂಧೆಕೋರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಠಾಣೆಯಲ್ಲೇ ಜಾಮೀನು ಪಡೆದು ಬಿಡಲಾಗುತ್ತಿದ್ದು ಇದೇ ಪ್ರಥಮ ಬಾರಿಗೆ ಇಬ್ಬರು ಆರೋಪಿಗಳಿಗೆ ಜಾಮೀನು ರಹಿತ ಪ್ರಕರಣದಡಿಯಲ್ಲಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೋಲಿಸ್ ಇನ್ಸ್‍ಪೆಕ್ಟರ್ ಜೆ,ಎಸ್.ತಿಪ್ಪೇಸ್ವಾಮಿ ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು