12:07 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ 

21/11/2021, 09:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು. ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ 20 ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , 12 ಮಂದಿ ಹಾಜರಾಗಿದ್ದರು ಮತ್ತು 10 ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು. ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು . 

ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು . 

ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು