10:15 PM Sunday24 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು