1:19 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಅಂತರ್‌ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು

21/11/2021, 17:02

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. 

ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ   ತಾಲೂಕು ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರು ಸ್ಥಳಕ್ಕೆ ಆಗಮಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿ ಗಮನಕ್ಕೂ ತಂದರು ಅವರು ಕೂಡ ಸುಮ್ಮನಿರೋದನ್ನ ಕಂಡರೆ ಲಂಚಕ್ಕೆ ಒಳಗಾಗಿದ್ದಾರೆನೋ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಭವಿಸಿದೆ.ಹಲವು ತಿಂಗಳುಗಳಿಂದ ಅಕ್ರಮ ಮರಳು ಸಾಗಾಟವಾಗುತ್ತಿದ್ದು, ಮರಳುಕೊರರಿಗೆ ನೇರವಾಗಿ ಸಾಥ್ ನೀಡುತ್ತಿದ್ದಾರಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯಗಳಲ್ಲಿ ಚರ್ಚೆಯಾಗುತ್ತಿದೆ.

ಹಾಡಹಗಲಿನಲ್ಲೇ ಮಹಾರಾಷ್ಟಕ್ಕೆಕರ್ನಾಟಕದ ಭೂ ಸಂಪತ್ತು ಅಕ್ರಮವಾಗಿ ಪೋಲ್ ಆಗುತ್ತಿದ್ದರು ಅಧಿಕಾರಿಗಳು ಕಂಡು ಕಾಣದ ಹಾಗೆ ಸುಮ್ಮನಿದ್ದನ್ನ ಕಂಡರೆ ಇಲ್ಲಿ ಮರಳು ಮಾಫಿಯಾ ಎಷ್ಟೊಂದು 

ಬಲಿಷ್ಠವಾಗಿದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ ಎಂದು ಸ್ಥಳೀಯರಾದ ಮಯೂರ ಸಿಂಗರು ಅಭಿಪ್ರಾಯಪಡುತ್ತಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅಬ್ಬಿಹಾಳ ಮಾಯಣಟ್ಟಿ, ಶಿವನೂರ, ಸಂಬರಗಿ, ನಾಗನೂರ,

ತಂವಶಿ, ಕಲ್ಲೂತಿ, ಶಿರೂರ ಗ್ರಾಮಗಳಲ್ಲಿ ಹಾದು ಹೋಗುವ ಆಗ್ರಾನಿ ನದಿಯಲ್ಲಿ ಸುಮಾರು ವರ್ಷಗಳಿಂದ ಮೌಲ್ಯವಿತವಾದ ಮಣ್ಣು ಹಾಗೂ ಮರಳು ನೆರೆ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡಿ ಸರಕಾರದ ಬೊಕ್ಕಸಕ್ಕೆ ಇನ್ನಿಲ್ಲದ ನಷ್ಟ

ಉಂಟು ಮಾಡುತ್ತಿದ್ದರು ಅಧಿಕಾರಿಗಳು ಮಾತ್ರ

ಮೌನಿಯಾಗಿರುವುದು ಆಘಾತವೇ ಸರಿ.

ಸರಕಾರದ ಖಜಾನೆಯಲ್ಲಿ ಹಣವಿಲ್ಲದೆ ಸಾಕಷ್ಟು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕೆಲವು ಇಲಾಖೆಯ ನೌಕರರ ಸಂಬಳ ಕೂಡ ಆಗಿಲ್ಲ.

ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರು ಅರ್ಧ ಸಂಬಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಮಾಡುವಂತಹ ಭ್ರಷ್ಟ ಮಾಫಿಯಾ ಕೊರರ ಹೆಡೆಮುರಿಕಟ್ಟಲು ಸರ್ಕಾರ ಯಾವ ನಿಯಮ ಜಾರಿಗೆ ತರುತ್ತದೆ ಅನ್ನೋದನ್ನ ಕಾದುನೋಡಬೇಕಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಮಹದೇವ್ ಮಡಿವಾಳ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು