ಇತ್ತೀಚಿನ ಸುದ್ದಿ
ಕಡೂರು: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; ಓರ್ವ ಸಾವು; ಮಲಗಿದ್ದಲ್ಲೇ ದಾರುಣ ಅಂತ್ಯ
22/11/2021, 14:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಡೂರು ತಾಲೂಕಿನ ಯಗಟಿಪುರದಲ್ಲಿ ಭಾರಿ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಭೋವಿ ಕಾಲೋನಿಯ ಮಂಜುನಾಥ್ (45) ಎಂದು ಗುರುತಿಸಲಾಗಿದೆ.ರಾತ್ರಿ ವೇಳೆ ಮಲಗಿದ್ದ ವ್ಯಕ್ತಿಯ ಮೇಲೆ ಕುಸಿದುಬಿದ್ದು ಈ ದುರಂತ ಸಂಭವಿಸಿದೆ.
ಯಗಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.