8:00 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್ ಶ್ವಾನ ದಳದ  ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ 

22/11/2021, 14:54

ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗೆ ಮೃತ ಲೀನಾಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಲೀನಾಳ ಅಂತ್ಯ ಸಂಸ್ಕಾರ ನಡೆಸಲಾಯಿತು. ಹೂವಿನಿಂದ ಅಲಂಕರಿಸಿದ ಪೆಟ್ಟಿಗೆಯಲ್ಲಿ ಇರಿಸಿ ಲೀನಾಳನ್ನು ತರಲಾಯಿತು.

2013 ಮೇ 5ರಂದು ಜನಿಸಿದ ಲೀನಾಗೆ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕುರಿತು ತರಬೇತಿ ನೀಡಲಾಗಿತ್ತು. ನಂತರ ಅದನ್ನು ಮಂಗಳೂರು ವಿಮಾನ ನಿಲ್ದಾಣ ಶ್ವಾನ ದಳಕ್ಕೆ ಸೇರಿಸಲಾಯಿತು.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎಂಬಾತ ಇರಿಸಿದ್ದ ಬಾಂಬ್ ಅನ್ನು ಇದೇ ಲೀನಾ ಪತ್ತೆ ಹಚ್ಚಿತ್ತು. ಮಂಗಳೂರು ವಿಮಾನ ನಿಲ್ದಾಣದ ಶ್ವಾನ ದಳದಲ್ಲಿರುವ 4 ಶ್ವಾನಗಳ ಪೈಕಿ ಲೀನಾ ಅತ್ಯಂತ ಚುರುಕು ಹಾಗೂ ಸೂಕ್ಷ್ಮಗ್ರಾಹಿ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು