11:26 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಳೆಯಿಂದಾಗಿ ಹಾನಿ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೂಚನೆ 

22/11/2021, 22:30

ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಿರಿಯೂರು ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸತತವಾಗಿ ಮಳೆ ಬರುತ್ತಿರುವ ಕಾರಣ ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳಾದ ತಹಶೀಲ್ದಾರರು, ಪೋಲೀಸ್ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿ ವರ್ಗದವರು ತಮ್ಮ ತಮ್ಮ ಮೊಬೈಲ್ ಗಳನ್ನು ಆನ್ ಮಾಡಿ ಇಟ್ಟುಕೊಳ್ಳಬೇಕು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ.

ಸಾರ್ವಜನಿಕರು ಮಳೆಯಿಂದಾಗಿ ಸಮಸ್ಯೆಗಳಿಗೆ ಸಿಲುಕಿದ ಸಂದರ್ಭದಲ್ಲಿ ತಮಗೆ ಪೋನ್ ಮಾಡಿದರೆ ಅವರ ಸಮಸ್ಯೆಗಳಿಗೆ ತಕ್ಷಣವೇ ತಾಲ್ಲೂಕು ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಬೇಕಾಗಿದೆ ಎಂಬುದಾಗಿ ಶಾಸಕರು ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಓಗಳು ನಗರಸಭೆ ಕಮೀಷನರ್ ಹಾಗೂ ಸಿಬ್ಬಂದಿ, ಪೋಲೀಸ್ ಇಲಾಖೆ ಡಿ.ವೈ.ಎಸ್.ಪಿ ಹಾಗೂ ಅಧೀನ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸ್ಥಳದಲ್ಲೇ ಇರುವಂತೆ ಸೂಚನೆ ನೀಡಬೇಕು ಎಂಬುದಾಗಿ ಅವರು ಹೇಳಿದ್ದಾರೆ.

ಸಾರ್ವಜನಿಕರು ಯಾರಾದರೂ ಫೋನ್ ಮಾಡಿದರೆ, ನಾವು ಮೀಟಿಂಗ್ ನಲ್ಲಿ ಇದ್ದೀವಿ ಎಂಬುದಾಗಿ ಸಬೂಬು ಹೇಳದೆ ಸಾರ್ವಜನಿಕರ ಕರೆಗಳನ್ನು ಅಧಿಕಾರಿಗಳು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರಲ್ಲದೆ.

ಸಾರ್ವಜನಿಕರು ಸತತ ಮಳೆ ಸುರಿಯುತ್ತಿರುವುದರಿಂದ ಹಳೆಯ ಮನೆಗಳ ಗೋಡೆ ಕುಸಿದು ಈಗಾಗಲೇ ಸಾವು-ನೋವು ಸಂಭವಿಸಿರುವುದರಿಂದ ಹಳೆಯ ಮನೆಗಳಲ್ಲಿ ಯಾರು ವಾಸಮಾಡುತ್ತಿದ್ದೀರಿ, ಅವರು ದಯಮಾಡಿ ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದಾಗಿ ಸಹ ತಿಳಿಸಿದ್ದಾರೆ

ತಾಲ್ಲೂಕಿನಲ್ಲಿ ಕಳೆದ 3 ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡದೆ ಮನೆಗಳಲ್ಲೇ ಸುರಕ್ಷಿತವಾಗಿರಬೇಕು. ಅಲ್ಲದೆ ಗ್ರಾಮಗಳ ಜನ ಹೊಲ, ಮನೆ, ಗದ್ದೆ, ತೋಟಗಳಿಗೆ ಓಡಾಡುವಾಗ ಎಚ್ಚರಿಕೆಯಿಂದ ಓಡಾಡಬೇಕು, ಹಳ್ಳ-ಕೊಳ್ಳಗಳ ಬಳಿ ಹೋಗಬಾರದು ಈ ಬಗ್ಗೆ ಅತ್ಯಂತ ಮುನ್ನೆಚ್ಚರಿಕೆ ವಹಿಸಿಬೇಕು ಎಂಬುದಾಗಿ ಹೇಳಿದ್ದಾರೆ.

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಿ.ಡಿ.ಓ ಗಳು ಯಾವುದೇ ಘಟನೆ ಸಂಭವಿಸಿದರೆ ತಕ್ಷಣವೇ ತಾಲ್ಲೂಕು ಆಡಳಿತಕ್ಕೆ ತಿಳಿಸಬೇಕು, ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂಬುದಾಗಿ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಶಾಸಕರಾದ ಪೂರ್ಣಿಮಾಶ್ರೀನಿವಾಸ್ ತಾಲ್ಲೂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು