11:51 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕನಕದಾಸರು ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ವೈಚಾರಿಕ ಸಂಗತಿಗಳನ್ನು ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತಿದ ಮಹಾನ್ ಚೇತನ 

23/11/2021, 10:09

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಜನಸಾಮಾನ್ಯರ ಆಡು ಭಾಷೆಯಾದ ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ಸಮಾಜದಲ್ಲಿನ ವೈಚಾರಿಕ ಸಂಗತಿಗಳನ್ನು, ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತುವ ಮೂಲಕ ವ್ಯಕ್ತಿಯ ಅಂತರಂಗವನ್ನು ಶುದ್ದೀಕರಿಸುವ ಜೊತೆಗೆ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ಚೇತನ ಕನಕದಾಸರು ಎಂಬುದಾಗಿ ತಾಪಂ ಇಒ ಮಡಗಿನ ಬಸಪ್ಪ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಕ್ತ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 
ಕನಕದಾಸರ ಕೀರ್ತನೆಗಳು ಸಮಾಜದ ಮೇಲುಕೀಳೆಂಬ ಭಾವನೆಗಳನ್ನು ಹೋಗಲಾಡಿಸಿ ಸಾಮಾಜಿಕ ನ್ಯಾಯದಡಿ, ಶೋಷಿತರ ವರ್ಗದ ಎಲ್ಲ ಜನರಿಗೂ ಸಮಾಜದಲ್ಲಿ ತಲೆಎತ್ತಿ ಬದುಕುವಂತೆ ಮಾಡಿದ ಕೀರ್ತಿ ಕನಕದಾಸರಿಗೆ ಸಲ್ಲಬೇಕಾಗುತ್ತದೆ ಎಂದರಲ್ಲದೆ ಜಾತಿ ಮತ್ತು ವರ್ಗ ಪದ್ದತಿ ವಿರುದ್ಧ ಕನಕದಾಸರು ನಡೆಸಿದ ಆಂದೋಲನಕ್ಕೆ ವಿಶ್ವ ಮಾನ್ಯತೆ ಸಿಗಬೇಕಿದೆ ಎಂಬುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು