10:22 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಮನೆ ಸೇರಿದಂತೆ ರಾಜ್ಯದ 15 ಕಡೆ ಎಸಿಬಿ ದಾಳಿ

24/11/2021, 10:37

ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 15ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಲಿಂಗೇಗೌಡ ಅವರ ಮನೆಗೂ ದಾಳಿ ನಡೆದಿದೆ.

ಲಿಂಗೇಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಅವಧಿ ಅವರು ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರನ್ನು ಮಂಗಳೂರು ಸ್ಮಾರ್ಟ್ ಸಿಟಿಗೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ವರ್ಗಾಯಿಸಲಾಗಿತ್ತು. ಮಂಗಳೂರು ಮಹಾನಗರಪಾಲಿಕೆಯಲ್ಲಿ ಜೆಇ ಆಗಿ ಅವರು ಸೇವೆ ಆರಂಭಿಸಿದ್ದರು. 15 ವರ್ಷಗಳ ಹಿಂದೆ ಅವರ ಮೇಲೆ ಲೋಕಾಯುಕ್ತ ತನಿಖೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು