11:07 PM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ವಸತಿ ಯೊಂದಿಗೆ 10 ಲಕ್ಷ ಪರಿಹಾರ ನೀಡಿ: ಗುನ್ನಳ್ಳಿ ರಾಘವೇಂದ್ರ ಆಗ್ರಹ

25/11/2021, 17:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ, ಇತ್ತೀಚೆಗೆ ಮನೆ ಬಿದ್ದು ವೃದ್ಧೆ ಎಂ.ಬಿ.ಕೊಟ್ರಮ್ಮ ಮೃತಪಟ್ಟಿರುವ ಕುಟುಂಬವನ್ನು ಭೇಟಿಯಾದ ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ 

ವಸತಿ ಜತೆಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಆಗ್ರಹಿಸಿದರು.

ಸರ್ಕಾರ  ಶೀಘ್ರವೇ ಮೃತ ನಿರಾಶ್ರಿತ ಕುಟುಂಬಕ್ಕೆ ವಸತಿ ಕಲ್ಪಿಸಬೇಕು. 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪ್ರತಿ ಗ್ರಾಮಗಳಲ್ಲಿ ಹತ್ತಾರು ನಿರಾಶ್ರಿತರಿದ್ದು ಅವರು ವಸತಿ ಹೊಂದಿಲ್ಲ. ಪ್ರತಿ ಗ್ರಾಮಗಳಲ್ಲಿ ಹತ್ತಾರು ನಿರಾಶ್ರಿತರು ಬೀಳುವಂತಹ ದುಸ್ಥಿತಿಯ ಮನೆಗಳಲ್ಲಿದ್ದಾರೆ. ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ನಿರಾಶ್ರಿತರು ಬೀಳುವಂತಹ ಶಿಥಿಲಾವಸ್ಥೆಯ ಮನೆಯಲ್ಲಿದ್ದಾರೆ. ಅವರ ಜೀವಕ್ಕೆ ಬೆಲೆ ಇಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ಬೇಕಾಬಿಟ್ಟಿ ಆಶ್ವಾಸನೆಗಳನ್ನು ನೀಡೋ ಜನಪ್ರತಿನಿಧಿಗಳು, ಸಂಕಷ್ಟದಲ್ಲಿರುವ ಬೀದಿಗೆ ಬಂದಿರುವ ನಿರಾಶ್ರಿತರ ಹಾಗೂ ಬಡ ಕಾರ್ಮಿಕರ ಗೋಳು ಆಲಿಸುತ್ತಿಲ್ಲ ಎಂದು ದೂರಿದ್ದಾರೆ.

ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕೂಡಲೇ ಮನೆಬಿದ್ದು ಮೃತಪಟ್ಟಿರುವ ಕುಟುಂಬಗಳಿಗೆ ಶೀಘ್ರವೇ ವಸತಿಯೊಂದಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ನಿರಾಶ್ರಿತ ಕುಟುಂಬಗಳಿಗೆ ಶೀಘ್ರವೇ  ವಸತಿಯೊಂದಿಗೆ ಯೋಗ್ಯ ಪರಿ ಮತ್ತು ಪರಿಹಾರ ಕಲ್ಪಿಸಬೇಕೆಂದು ರಾಘವೇಂದ್ರ ಒತ್ತಾಯಿಸಿದ್ದಾರೆ. 

ಈ ನಿಟ್ಟಿನಲ್ಲಿ ಶಾಸಕರು, ಸಂಸದರು ಮನಸ್ಸು ಮಾಡಬೇಕಿದೆ ಮತ್ತು ಶೀಘ್ರವೇ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಬೇಕಿದೆ. ಸೂಕ್ತ ಪರಿಹಾರ ನೀಡಬೇಕಿದೆ ಅವರು ತಮ್ಮ ಕನಿಷ್ಠ ಜವಾಬ್ದಾರಿಯನ್ನ ಸಕಾಲಕ್ಕೆ ನಿರ್ವಹಿಸಬೇಕಿದೆ. ತಾಲೂಕಾಡಳಿತ, ಜಿಲ್ಲಾಡಳಿತ ಪ್ರಾಮಾಣಿಕವಾಗಿ ನೆರವು ಕಲ್ಪಿಸಬೇಕಿದೆ. ನಿರ್ಲಕ್ಷ್ಯ ತೋರಿದ್ದಲ್ಲಿ ಜನವಿರೋಧಿ ನೀತಿಯ ವಿರುದ್ಧ ಸಮಾನ ಮನಸ್ಕ ಸಂಘಟನೆಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ಬೀದಿಗಿಳಿದು ಹೋರಾಡಬೇಕಾಗುತ್ತದೆ. ನಮ್ಮದು ಪಕ್ಷಾತೀತ ಹೋರಾಟವಾಗಿದ್ದು, ಪಕ್ಷಾತೀತವಾಗಿ ಸಮಾನ ಮನಸ್ಕ ಜನಪ್ರತಿನಿಧಿಗಳ ಸಹಕಾರದಲ್ಲಿ ಹೋರಾಟ ಮಾಡಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 

ವೃದ್ಧೆ ಮನೆ ಕುಸಿತಕ್ಕೆ ಬಲಿಯಾಗಿರುವುದು ಒಂದು ದುರಾದೃಷ್ಟ ಸಂಗತಿಯಾಗಿದ್ದು, ತುಪ್ಪಕ್ಕನಹಳ್ಳಿಯ ಕೊಟ್ರಮ್ಮಳು ಮೃತಪಟ್ಟಿರುವ  ಅನಾಹುತಕ್ಕೆ ಪ್ರಕೃತಿಯ ವೈಪರಿತ್ಯ ಕಾರಣವಾದರೂ, ಸ್ಥಳೀಯ ಆಡಳಿತ ಹಾಗೂ ತಾಲೂಕು ಆಡಳಿತದ ನಿರ್ಲಕ್ಷ್ಯ ಧೋರಣೆಯೂ ಪರೋಕ್ಷ ಕಾರಣ ಎಂದು ಅವರು ಕಿಡಿಕಾರಿದ್ದಾರೆ. 

ನಿರಾಶ್ರಿತರಿಗೆ ಆಶ್ರಯ ಕಲ್ಪಿಸದೇ ಸ್ಥಳೀಯ ಆಡಳಿತ ನಿರ್ಲಕ್ಷ್ಯ ತೋರಿದ್ದು,ಇಂತಹ ಕುಟುಂಬಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಈ ಅನಾವುತಕ್ಕೆ ಕಾರಣ ಎಂದು ರಾಘವೇಂದ್ರ ದೂರಿದ್ದಾರೆ. ಈ ಸಂದರ್ಭದಲ್ಲಿ ಹೋರಾಟಗಾರ ಹಾಗೂ ವಕೀಲರಾದ ಸಿ.ವಿರುಪಾಕ್ಷಪ್ಪ, ತುಪ್ಪಕ್ಕನಹಳ್ಳಿ ಗ್ರಾಮಸ್ಥರು ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು