1:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? 

25/11/2021, 18:06

ಉಡುಪಿ(reporterkarnataka.com): ಸೇಲ್ಸ್‌ ಮೆನ್‌ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. 

ನ.23ರಂದು ಸಂಜೆ 6.15ರ ಸುಮಾರಿಗೆ ಉಡುಪಿ ವಿದ್ಯಾಸಮುದ್ರ ಮಾರ್ಗದಲ್ಲಿರುವ 

ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಆಭರಣ  ಮಳಿಗೆಗೆ ಆಭರಣ ಖರೀದಿಸುವ ನೆಪದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಬ್ಬರು ಬಂದಿದ್ದು, ಅವರಿಗೆ ಮಳಿಗೆಯ ಮೊಹಮ್ಮದ್‌ ಮುಬಾರಕ್‌ ಚಿನ್ನದ ಬಳೆಗಳನ್ನು ತೋರಿಸಿದ್ದಾರೆ. ಆದರೆ ಆರೋಪಿ ಮಹಿಳೆಯರಿಬ್ಬರು ಮುಬಾರಕ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ ₹3 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಜ್ಯುವೆಲ್ಲರ್ಸ್ ಮಳಿಗೆಯ ಮ್ಯಾನೇಜರ್ ಮೊಹಮ್ಮದ್‌ ಅಜ್ಮಲ್‌ ನೀಡಿರುವ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು