7:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ

25/11/2021, 20:34

ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. 

ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆಯನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಮತ್ತೆ ಹಸ್ತಾಂತರಿಸಲಾಯಿತು.

ಏನಿದು ವಿವಾದ?: ಬಸ್ರೂರು ರಾಜೀವ ಶೆಟ್ಟಿ ಹಾಗೂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ವಿರುದ್ಧ ಹಣ ದುರುಪಯೋಗ ಮಾಡಿರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ ಅವರು ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ನೇಮಿಸಿದ್ದರು. ಇದರ ವಿರುದ್ಧ ಬಸ್ರೂರು ರಾಜೀವ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ನ್ಯಾಯಾಧೀಶರಾದ ವೀರಪ್ಪ ಮತ್ತು ರೇಖಾ ಅವರು ಪ್ರಕರಣ ಕೈಗೆತ್ತಿಕೊಂಡು ತಲ್ಲೂರು ಶಿವರಾಮ ಶೆಟ್ಟಿ, ಎಸ್. ನಾಗಣ್ಣ ಮತ್ತು ಜಿ. ಜಗದೀಶ್ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿದ್ದು, ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಆದೇಶ ನೀಡಿದ್ದರು. ಅದರಂತೆ ಇಂದು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಸಭಾಪತಿ ಸ್ಥಾನ ಹಾಗೂ ಕಾರ್ಯದರ್ಶಿ ಸ್ಥಾನವನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು