6:01 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು

25/11/2021, 23:32

ಕಾರ್ಕಳ(reporterkarnataka.com): ಬುಧವಾರ ರಾತ್ರಿ ಕಾರ್ಕಳ ಕುಕ್ಕುಂದೂರು ಗ್ರಾಮದ ದುರ್ಗಾನಗರ ಅಶ್ವಥ ಕಟ್ಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ.

ಮೃತರನ್ನು ಮಹಮ್ಮದ್ ರಫೀಕ್‌ ಎಂದು ಗುರುತಿಸಲಾಗಿದೆ. ರಫೀಕ್ ನಿನ್ನೆ ರಾತ್ರಿ ದುರ್ಗಾನಗರ ಅಶ್ವಥಕಟ್ಟೆ ಹತ್ತಿರ ವಾಹನ ನಿಲ್ಲಿಸಿ ರಸ್ತೆ ದಾಟಲು ನಿಂತುಕೊಂಡಿದ್ದರು. ಈ ವೇಳೆ ಅರವಿಂದ ಕಾಮತ್ ಎಂಬವರು ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ತನ್ನ ಕಾರನ್ನು ಚಲಾಯಿಸಿಕೊಂಡು ಬಂದು ರಫೀಕ್ ಗೆ ಡಿಕ್ಕಿ‌ ಹೊಡೆದಿದ್ದರು.

ಕಾರು ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ಮಹಮ್ಮದ್ ರಫೀಕ್ ಅವರ ಹಿಂಬದಿ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಫೀಕ್ ನ.25 ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು