9:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು