6:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ

26/11/2021, 12:06

ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.

ದೇವಸ್ಥಾನಕ್ಕೆ ಎದುರುಗಡೆ ಇರುವ ಸರ್ಕಾರಿ ಭೂಮಿಯನ್ನು ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ಯರಬಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಕುರಿತು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸರ್ಕಾರದ ಜಾಗವನ್ನು ಮಂಜೂರು ಮಾಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಟಿ.ಜನಾರ್ಧನ್, ಚಿದಾನಂದಯ್ಯ, ಗಿರೀಶ್, ನಾಗರಾಜು, ಎಂ.ಮಂಜುನಾಥ್, ಒ.ಆರ್.ಮಂಜುನಾಥ್, ಚಕ್ರಪಾಣಿ, ಪ್ರಕಾಶ್, ಜಿ.ಸೋಮಶೇಖರಯ್ಯ, ವೀರನಾಯ್ಕ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು