ಇತ್ತೀಚಿನ ಸುದ್ದಿ
ಬಾಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧನ ಅತ್ಯಾಚಾರ: ಆರೋಪಿ ಬಂಧನ; ಪೋಕ್ಸೋ ದಾಖಲು
26/11/2021, 17:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
16ರ ಹರೆಯದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ.
ಸುದೀಪ್ (20) ಯುವಕ ಅತ್ಯಾಚಾರ ನಡೆಸಿದ ಆರೋಪಿ ಬಾಳೂರು ಹಳ್ಳಿಕೇರೆ ಮೂಲದವನಾಗಿದ್ದಾನೆ.
ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈ ಗೊಂಡಿದ್ದಾರೆ. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.