6:56 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬ ಭಾರತೀಯನೂ ಸಂವಿಧಾನವನ್ನು ಗೌರವಿಸಬೇಕು: ಶಾಸಕ ವೇದವ್ಯಾಸ ಕಾಮತ್

26/11/2021, 20:47

ಮಂಗಳೂರು(reporterkarnataka.com): ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಭವಿಷ್ಯವನ್ನು ಚಿಂತಿಸಿ ಬರೆದ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯರೂ ಆಧರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ಬಿಜೆಪಿ ಎಸ್.ಸಿ. ಮೋರ್ಚಾದ ವತಿಯಿಂದ ನಡೆದ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರದ ಭಾರತವು ಹೀಗಿರಬೇಕು ಎನ್ನುವ ಪರಿಕಲ್ಪನೆಯೊಂದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಿದ್ಧಪಡಿಸಿದ ಸಂವಿಧಾನವನ್ನು ಗೌರವಿಸುವ ಕಾರ್ಯ ಆಗಬೇಕಿದೆ. ದೇಶದ ಪ್ರಗತಿಗೆ ಸಂವಿಧಾನವೆಂಬ ಪವಿತ್ರ ಗ್ರಂಥವು ದಾರಿದೀಪವಾಗಿದೆ ಎಂದು ಹೇಳಿದರು. 

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿ, ರಾಷ್ಟ್ರೀಯ ಅಂತಃ ಸತ್ವವನ್ನು ಅರಿತು ಡಾ. ಬಿ.ಆರ್ ಅಂಬೇಡ್ಕರ್ ಅವರ ನೀಡಿರುವ ಸಂವಿಧಾನವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವಲ್ಲಿ ಮಹತ್ತರದ ಪಾತ್ರ ವಹಿಸಿದೆ. ಇಂದಿನ ದಿನ ದೇಶಕ್ಕೆ ಸಂವಿಧಾನವನ್ನು ಸಮರ್ಪಿಸುವ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಮಹತ್ತರದ ಕೊಡುಗೆ ನೀಡಿದ ಅಂಬೇಡ್ಕರ್ ಅವರನ್ನು ಭಾರತವು ಎಂದಿಗೂ ಮರೆಯದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಕಾರ್ಪೋರೇಟರ್ ಪೂರ್ಣಿಮಾ, ಭರತ್, ಗಣೇಶ್ ಕುಲಾಲ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಕಾರ್ಯದರ್ಶಿ ರೂಪಾ. ಡಿ ಬಂಗೇರ, ಉಪಾಧ್ಯಕ್ಷರಾದ ಕಿರಣ್ ರೈ,  ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿನಯ್ ನೇತ್ರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಲ್ತಿಮಾರ್, ಬೋಜರಾಜ್ ಕೋಟ್ಯಾನ್, ಎಸ್.ಸಿ ಮೋರ್ಚಾ ಮಂಡಲಾಧ್ಯಕ್ಷ ರಘುವೀರ್ ಬಾಬುಗುಡ್ಡೆ, ಬಿಜೆಪಿ ಮುಖಂಡರಾದ ಮಂಗಳಾ ಆಚಾರ್, ಸಂದೇಶ್ ಗಾಂಧಿನಗರ, ಪ್ರಜ್ವಲ್ ಚಿಲಿಂಬಿ, ರಾಧಾಕೃಷ್ಣ ಕಂಕನಾಡಿ, ಸಂದೀಪ್ ಬೋಳೂರು, ಮೇಘರಾಜ್ ಬಲ್ಲಾಳ್ ಭಾಗ್, ಸುನಂಧ ಕೊಟ್ಟಾರ ಕ್ರಾಸ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು