6:12 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಕೋಲಾರದಲ್ಲಿ ಅಂತಿಮ ಕಣದಲ್ಲಿ 4 ಮಂದಿ ಅಭ್ಯರ್ಥಿಗಳು

26/11/2021, 21:56

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿಲ್ಲ.

ಅಂತಿಮ ಕಣದಲ್ಲಿ 4 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ವಿಧಾನ ಪರಿಷತ್  ಚುನಾವಣೆ ಹಾಗೂ ವಿಶ್ವ ಏಡ್ಸ್ ದಿನಾಚಾರಣೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಂ.ಎಲ್. ಅನಿಲ್ ಕುಮಾರ್ , ಜನತಾದಳ ( ಜಾತ್ಯತೀತ ) ಪಕ್ಷದ ಅಭ್ಯರ್ಥಿಯಾಗಿ ವಿ.ಇ.ರಾಮಚಂದ್ರ , ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಡಾ.ಕೆ.ಎನ್. ವೇಣುಗೋಪಾಲ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪಿ.ಅನಿಲ್ ಕುಮಾರ್ ಅವರು ಸ್ಪರ್ಧಿಸಿದ್ದಾರೆ ಎಂದು ಅವರು ತಿಳಿಸಿದರು . ಚುನಾವಣೆ ಮತದಾನ ಡಿಸೆಂಬರ್ 10ರಂದು ಬೆಳಗ್ಗೆ 8.00 ಗಂಟೆಗೆ ಪ್ರಾರಂಭವಾಗಿ ಸಂಜೆ 4.00 ಗಂಟೆಗೆ ಮುಕ್ತಾಯವಾಗುತ್ತದೆ. ಗ್ರಾಮ ಪಂಚಾಯಿತಿ , ಪುರಸಭೆ ಹಾಗೂ ನಗರಸಭೆ ಸದಸ್ಯರು ಮತದಾನರಾಗಿದ್ದು ಕೋಲಾರ ಜಿಲ್ಲೆಯಲ್ಲಿ 2925 ಮತದಾರರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2925 ಮತದಾರರು , 2675 ಪುರುಷರು ಹಾಗೂ 2925 ಮಹಿಳೆಯರು ಸೇರಿ ಒಟ್ಟು 5600 ಮತದಾರರಿದ್ದಾರೆ.ಒಟ್ಟು 321 ಮತಗಟ್ಟೆಗಳನ್ನು ಆಯೋಜಿಸಿದ್ದು , 73 ಅತಿ ಸೂಕ್ಷ್ಮ ಮತ್ತು 105 ಸೂಕ್ಷ್ಮ ಮತಕಟ್ಟೆಗಳನ್ನು ಗುರುತಿಸಿದ್ದು ಸೂಕ್ತ ಬಂದೊಬಸ್ತ್ ಮತ್ತು ರಕ್ಷಣೆಯನ್ನು ಒದಗಿಸಲು ಪೋಲಿಸ್ ಸಿಬ್ಬಂದಿ ಸಿದ್ದರಾಗಿದ್ದಾರೆ . ಚುನಾವಣೆಯ ಮತ ಎಣಿಕೆಯನ್ನು ಡಿಸೆಂಬರ್ 14 ರಂದು ಬೆಳಿಗ್ಗೆ 8.00 ಗಂಟೆಗೆ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು . 

ಡಿಸೆಂಬರ್ 1ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ವಿಶ್ವ ಏಡ್ಸ್ ದಿನಾಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಸಮಾನತೆಗಳನ್ನು ಕೊನೆಗೊಳಿಸಿ ಏಡ್ಸ್‌ನ್ನು ಕೊನೆಗೊಳಿಸಿ . ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಈ ವರ್ಷದ ಘೋಷಣೆಯಾಗಿದೆ. ಸಮುದಾಯದಲ್ಲಿ ಏಡ್ಸ್ ಖಾಯಿಲೆಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು . ಹೆಚ್.ಐ.ವಿ ಸೋಂಕು ಕೇವಲ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ , ತಪಾಸಣೆಗೊಳಿಸದ ರಕ್ತ ಮತ್ತು ರಕ್ತದ ಉಪ ಪದಾರ್ಥಗಳಿಂದ , ಸೋಂಕಿತ ತಾಯಿಯಿಂದ ಮಗುವಿಗೆ ಹಾಗೂ ಸೋಂಕಿತ ಸೂಜಿ , ಸಿರಿಂಜ್ ಮತ್ತು ಶಸ್ತ್ರಕ್ರಿಯಾ ಸಾಧನಗಳಿಂದ ಮಾತ್ರ ಹರಡುತ್ತದೆ ಎಂದು ಅವರು ತಿಳಿಸಿದರು . ಈ ಸಂದರ್ಭದಲ್ಲಿ ಚುನಾವಣೆ ತಶಿಲ್ದಾರ್ ನಾಗವೇಣಿ , ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ. ಕಮಲ ಅವರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು