12:13 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ

27/11/2021, 22:46

ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್‌ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೋಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರತ್ನಾಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದಿರುವುದು ಕಂಡು ಬಂದಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ರತ್ನಾಕರ್ ಚೆಲ್ಲಾಟ ನಡೆಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿ ರತ್ನಾಕರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇನ್‌ಸ್ಪೆಕ್ಟರ್ ರೇವತಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯ ಮೊಬೈಲ್ ಫೋನ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು