4:20 PM Thursday23 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17…

ಇತ್ತೀಚಿನ ಸುದ್ದಿ

ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ

28/11/2021, 09:43

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರಘುಮೂರ್ತಿ ತಾಕೀತು ಮಾಡಿದರು.

ನಗರದ ತಾಲೂಕು ಕಚೇರಿಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಆಯೋಜಿಸಿದ್ದ ಬೆಳೆ ನಷ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಳೆದ 15 ದಿನಗಳಿಂದ ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆಗೆ ತಾಲೂಕಿನಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಶೇಂಗಾ, 1200 ಹೆಕ್ಟೇರ್ ಕಡಲೆ, 8900 ಹೆಕ್ಟೇರ್ ಈರುಳ್ಳಿ, 770 ಹೆಕ್ಟೇರ್ ದಾಳಿಂಬೆ ಪಪ್ಪಾಯಿ ಬೆಳೆ ನಷ್ಟವಾಗಿದ್ದು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರೈತರು ಈಗಾಲೆ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದು ಅನಾವಶ್ಯಕವಾಗಿ ಅರ್ಜಿಗಳನ್ನು ಪಡೆಯುವುದು , ಕಚೇರಿಗೆ ಅಲೆದಾಡಿಸದೆ ಈಗಾಗಲೆ  ನಷ್ಟವಾದ ವರದಿಯನ್ನು ಶನಿವಾರ, ಭಾನುವಾರ ರಜೆ ದಿನಗಳನ್ನು ಲೆಕ್ಕಿಸದೆ ಕಚೇರಿಯಲ್ಲಿ ಕುಳಿತು ಬೆಳೆ ಪರಿಯಾರ ತಂತ್ರಾಂಶದಲ್ಲಿ ರೈತರ ಬ್ಯಾಂಕ್ ಖಾತೆ ಸೇರಿದಂತೆ ಎಲ್ಲಾ ಮಾಹಿತಿ ಇದ್ದು ಅದನ್ನು ತಂತ್ರಾಂಶದಲ್ಲಿ ಅಳವಿಡಿಸಿ ರೈತರ ಖಾತೆಗೆ ನೇರವಾಗಿ ಬೆಳೆ ಪರಿಹಾರದ ಹಣ ಜಮ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ  ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಕಂದಾಯ ನಿರೀಕ್ಷಕ ಲಿಂಗೇಗೌಡ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು