12:32 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ ಕುರಿತು ಹೇಳಿದ್ದೇನು?

28/11/2021, 11:08

ಕಲಬುರಗಿ(reporterkarnataka.com): ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ಲವ್, ಸೆಕ್ಸ್, ಮೋಸದ ಆರೋಪ ಕೇಳಿ ಬಂದಿದೆ. ದೆಹಲಿ ಮೂಲದ ಯುವತಿಯೊಬ್ಬಳು ಆರೋಪ ಮಾಡಿದ್ದಾಳೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಲಾಗಿದೆ.

ನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಯುವತಿ ಟ್ವೀಟ್ ಮಾಡಿದ್ದಾಳೆ. ಸಾಮಾಜಿಕ ಜಾಲತಾಣಗಳ ಮೂಲಕವೇ ಯುವತಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾಳೆ.

ಯುವತಿಯ ಟ್ವೀಟ್ ಇದೀಗ ವೈರಲ್ ಆಗಿದೆ. ಆದರೆ ಈ ಬಗ್ಗೆ ಯುವತಿ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿಲ್ಲ.

ಕಲಬುರಗಿ ಆಯುಕ್ತ ಸ್ನೇಹಲ್ ಹಾಗೂ ಯುವತಿ ನಡುವಿನ ವಾಟ್ಸಾಪ್  ಚಾಟಿಂಗ್, ಆಯುಕ್ತರ ಶರ್ಟ್ ಲೆಸ್ ಫೋಟೋ ಕೂಡ ವೈರಲ್ ಆಗಿದೆ ಎಂದು ತಿಳಿಯಲಾಗಿದೆ.

ಆಯುಕ್ತ ಸ್ನೇಹಲ್ ಈ ಕುರಿತು ಪ್ರತಿಕ್ರಿಯಿಸಿ,
‘ನನ್ನ ವಿರುದ್ಧ ಆರೋಪಿಸಿರುವ ಯುವತಿ ಯಾರೆಂದು ನನಗೆ ಗೊತ್ತಿಲ್ಲ. ಈ ಬಗ್ಗೆ ಪೊಲೀಸರಿಗೂ ನಾನು ದೂರು ನೀಡಿದ್ದೇನೆ. ನನ್ನ ಹೆಸರು ಕೆಡಿಸಲು ಈ ರೀತಿಯಾಗಿ ಮಾಡುತ್ತಿದ್ದಾರೆ. ಯುವತಿ ಜೊತೆ ನಾನು ಯಾವುದೇ ಚಾಟಿಂಗ್ ಮಾಡಿಲ್ಲ. ಫೋಟೋ ಚಾಟಿಂಗ್ ಬಗ್ಗೆಯೂ ಗೊತ್ತಿಲ್ಲ. ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಫೋಟೋ ಎಲ್ಲಿಂದ ತೆಗೆದುಕೊಂಡರು ಎಂಬುದೂ ನನಗೆ ಗೊತ್ತಿಲ್ಲ” ಎಂದು ತಿಳಿಸಿದ್ದಾರೆ.

ಆದರೆ ಯುವತಿ ಹಾಗೂ ಪಾಲಕರು ಕಲಬುರಗಿ ಪೊಲೀಸ್ ಆಯುಕ್ತರಿಗೂ ಈ ಕುರಿತು ಮಾಹಿತಿ ನೀಡಿದ್ದಾರೆ. ಆದರೆ ಅಲ್ಲಿ ಲಿಖಿತ ದೂರು ನೀಡಿಲ್ಲ.ಘಟನೆ ದೆಹಲಿಯಲ್ಲಾಗಿರುವುದರಿಂದ ದೆಹಲಿಯಲ್ಲೇ ದೂರು ನೀಡಬೇಕು ಎಂದು ಪೊಲೀಸರು ಯುವತಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು