10:04 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿ 15 ತಿಂಗಳು ಕಳೆದರೂ ವಿಲೇವಾರಿಯಾಗದ ಶವಗಳು!!

29/11/2021, 19:17

ಬೆಂಗಳೂರು(reporterkarnataka.com): ಕೊರೊನಾ ಜಗತ್ತುನ್ನು ಕಾಡುತಿದ್ದರೆ ಮಾನವೀಯತೆ ಮರೆತ ಅದೆಷ್ಟೋ ಪ್ರಸಂಗಗಳು ಎದುರಾಗುತ್ತಿದೆ. ಇದೊಂದು ಮಾನವೀಯತೆ ಮರೆತ ಪ್ರಕರಣ ರಾಜ್ಯದ ನಿದ್ದೆಗೆಡಿಸಿದೆ. ಬೆಂಗಳೂರಿನ ರಾಜಾಜಿನಗರದ ಇಎಸ್ ಐ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ವಿಧವೆ ಸಹಿತ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದಲ್ಲಿ ಕೊಳೆಯುತ್ತಿದ್ದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.

ಎರಡು ಶವಗಳು ಕೊಳೆತ ಸ್ಥಿತಿಯಲ್ಲಿದ್ದರಿಂದ ಮುಖ ಚಹರೆ ಸಿಗದೆ ದೊಡ್ಡ ತಲೆನೋವಾಗಿತ್ತು. ಕೊನೆಗೆ ಒಂದೂವರೆ ವರ್ಷದಿಂದ ಮೃತರಾದವರ ಪಟ್ಟಿ ಮತ್ತು ಹಸ್ತಾಂತರ ಮಾಡಿದ ಶವಗಳ ವಿವರವನ್ನು ಸುದೀರ್ಘವಾಗಿ ಪರಿಶೀಲನೆ ನಡೆಸಿದಾಗ ಚಾಮರಾಜಪೇಟೆಯ ವಿಧವೆ ದುರ್ಗಾ ಮತ್ತು ಕೆ.ಪಿ. ಅಗ್ರಹಾರದ ಮುನಿರಾಜು ಎಂಬುದು ಗೊತ್ತಾಗಿದೆ. ಪೊಲೀಸರು, ದುರ್ಗಾ ಅವರ ಅಣ್ಣನ ಮೊಬೈಲ್ ನಂಬರ್ ಪಡೆದು ಕರೆ ಮಾಡಿ ವಿಷಯ ಮುಟ್ಟಿಸಿದರೂ ಪ್ರಯೋಜನವಾಗಿಲ್ಲ. ಮತ್ತೊಂದೆಡೆ ಮುನಿರಾಜು ಕಡೆಯವರ್ಯಾರೂ ಸಂಪರ್ಕಕಕ್ಕೆ ಸಿಕ್ಕಿಲ್ಲ. ಹೀಗಾಗಿ ರಾಜಾಜಿನಗರ ಪೊಲೀಸರು ಸೋಮವಾರ ಕೆ.ಪಿ. ಅಗ್ರಹಾರಕ್ಕೆ ಭೇಟಿ ಕೊಟ್ಟು ಮುನಿರಾಜು ಅವರ ಪಾಲಕರು ಮತ್ತು ಸಂಬಂಧಿಕರ ಬಗ್ಗೆ ಮಾಹಿತಿ ಕಲೆ ಹಾಕಲು ನಿರ್ಧರಿಸಿದ್ದಾರೆ.

ದಾಖಲೆ ಪರಿಶೀಲಿಸಿದಾಗ ಮೃತರ ಗುರುತು ಗೊತ್ತಾಗಿದೆ. ವಿಳಾಸ ಮತ್ತು ಸಂಬಂಧಿಕರ ಮೊಬೈಲ್ ನಂಬರ್ ಪಡೆದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು