1:52 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ

30/11/2021, 13:55

ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಮತ್ತೆ ಗ್ಯಾಂಗ್ ವಾರ್ ತಲೆ ಎತ್ತಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ರೌಡಿಗಳ ಗ್ಯಾಂಗ್ ವಾರ್ ನಡೆದಿದೆ. ಓರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ದಾಳಿಗೊಳಗಾದ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದೆ.

ಅಳಕೆ ಗ್ಯಾಂಗ್ ತಂಡದ 8 ಮಂದಿ ಶ್ರವಣ್‍ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಪರಿಸ್ಥಿತಿ ಚಿಂತಾಜನಕವಾಗಿದೆ‌ ಎನ್ನಲಾಗಿದೆ.

2020ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಕೊಲೆ ಪ್ರಕರಣ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರ. ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು