2:03 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

01/12/2021, 20:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

 info.reporterkarnataka@gmail.com

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರ ವಿಜಯೇಂದ್ರ ಅವರು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ ಅವರು ದೂರು ನೀಡಿದ್ದರು. ಅಂತಹ ಬಿಜೆಪಿ ನಾಯಕರಿಗೆ ತಾವು ಶ್ರೀರಾಮಚಂದ್ರನ ಮೊಮ್ಮಕ್ಕಳು ಎಂದು ಹೇಳಿಕೊಳ್ಳಲು ನಾಚಿಕೆ ಆಗಲ್ವಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ವಾಗ್ದಾಳಿ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಮೊದಲ ಬಾರಿ ಅಧಿಕಾರಕ್ಕೆ ಬಂದಾಗ ಬಿಜೆಪಿ ಮೂವರು ಮುಖ್ಯಮಂತ್ರಿಗಳನ್ನು ಕಂಡಿತು.

3 ಪಕ್ಷಗಳಾಗಿ ವಿಭಜನೆಯಾಯಿತು. ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಲು ನೈತಿಕತೆ ಏನಿದೆ ಎಂದು ಅವರು ಪ್ರಶ್ನಿಸಿದರು.

ಈ ಮುಖ್ಯಮಂತ್ರಿಯೂ ಬದಲಾಗ್ತಾರೆ ಅನ್ನೋ ಮುನ್ಸೂಚನೆಯನ್ನ ಈಶ್ವರಪ್ಪ ನೀಡಿದ್ದಾರೆ. ನಿಜವಾಗಿ ಹೈಕಮಾಂಡ್ ಇದನ್ನು ಹೇಳಬೇಕಿತ್ತು.

ನಳಿನ್ ಕುಮಾರ್  ಕಟೀಲ್, ಈಶ್ವರಪ್ಪ, ಸಿ.ಟಿ.ರವಿ ಅವರಿಂದ ಆರೆಸ್ಸೆಸ್ ಈ ಹೇಳಿಕೆ ಕೊಡಿಸುತ್ತಿದೆ ಎಂದರು. 

ಇತ್ತೀಚಿನ ಸುದ್ದಿ

ಜಾಹೀರಾತು