10:01 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಲೈಸೆನ್ಸ್ ಇಲ್ಲದ ಗನ್ ಪತ್ತೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಯುವಕನ ಬಂಧನ

02/12/2021, 17:58

ಮಂಗಳೂರು(reporterkarnataka.com): ಅಕ್ರಮ ಗನ್ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. 

ಬಂಧಿತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಎಂದು ಗುರುತಿಸಲಾಗಿದೆ.

ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಯನ್ನು ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಕಾರನ್ನು ಪಾರ್ಕ್ ಮಾಡಿದ್ದಾಗ ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸಿದರು.

ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿತ್ತು. ಗನ್ ಗೆ ಲೈಸನ್ಸ್ ಇಲ್ಲದ ಕಾರಣ ಯುವಕನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದು, ಬಜಪೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. 

ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು