3:37 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವಿಜಯಪುರ ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರ ಕೋಡಿ: ಪ್ರದೀಪ ಎಂಟಮಾನ ಭೀಕರ ಕೊಲೆ; ಕಲ್ಲು, ಬಡಿಗೆಯಿಂದ ಹತ್ಯೆ

04/12/2021, 09:01

ವಿಜಯಪುರ(reporterkarnataka.com): ಭೀಮಾತೀರ ಮತ್ತೆ ಸದ್ದು ಮಾಡಲಾರಂಭಿಸಿದರು. ಅಲ್ಲಿ ಮತ್ತೆ ನೆತ್ತರು ಕೋಡಿ ಹರಿದಿದೆ. ಭೀಕರ ಕೊಲೆಯೊಂದು ನಡೆದಿದೆ.

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ತಡರಾತ್ರಿ ಈ ಭೀಕರ ಕೊಲೆ ನಡೆದಿದೆ.

ಆಲಮೇಲ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಅವರ ಹತ್ಯೆ ನಡೆದಿದೆ.  

ಪ್ರದೀಪ ಎಂಟಮಾನ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಸ್ನೇಹಿತರೊಂದಿಗೆ ತೆರಳಿದ್ದ ವೇಳೆ 4-5 ಮಂದಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಪ್ರದೀಪ ಎಂಟಮಾನ ಕೊಲೆ ಮಾಡಲಾಗಿದೆ.

ಪ್ರದೀಪ ಎಂಟಮಾನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರದೀಪ್ ರೌಡಿಶೀಟರ್ ಕೂಡ ಹೌದು.

ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು