11:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

RK Impact : ಲಾಕ್ ಡೌನ್ ನೆಪದಲ್ಲಿ ವ್ಯಾಪಾರಿಗಳಿಂದ ಜನಸಾಮಾನ್ಯರ  ಸುಲಿಗೆ ತಪ್ಪಿಸಲು ಕ್ರಮ:  ನೋಡೆಲ್ ಅಧಿಕಾರಿಗಳ ನೇಮಕ

01/06/2021, 06:54

ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮಧ್ಯೆ ದಿನಬಳಕೆಯ ಸಾಮಗ್ರಿಗಳ ದರ ನಿಯಂತ್ರಣ ಬಗ್ಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳನ್ನು ಎ.ಪಿ.ಎಂ. ಎಪಿಎಂಸಿ ಅಥವಾ ಹಾಪ್ ಕಾಮ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸಿ ಮಾರಾಟ ಸಿ ಅಥವಾ ಹಾಪ್ ಕಾಮ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಈ ವಿಚಾರದಲ್ಲಿ ಸಾರ್ವಜನಿಕರಿಂದ ದೂರು ಅಹವಾಲುಗಳು ಬಂದಲ್ಲಿ, ಅವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರವೀಣ್, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಣಿ ಇವರುಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಸಾರ್ವಜನಿಕರುಗಳು ನಿಮ್ಮ ದೂರು ಅಥವಾ ಅಹವಾಲುಗಳನ್ನು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ. ಮೊ.ನಂ. 9483908000 ಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ. ನೋಡಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾಗುವ ದೂರುಗಳಿಗೆ ತಕ್ಷಣವೇ ಸ್ಪಂದಿಸಿ. ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು ತರಕಾರಿ, ಹಣ್ಣುಹಂಪಲು ಎಪಿಎಂಸಿ/ಹಾಪ್ ಕಾಪ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ಮಾರಾಟವಾಗದಂತೆ ಕ್ರಮ ವಹಿಸಿ ಯಾವುದೇ ಗೊಂದಲಗಳುಂಟಾಗದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ  ತಿಳಿಸಿದ್ದಾರೆ.

ಜಿನಸಿ ಅಂಗಡಿ ಮಾಲೀಕರು, ತರಕಾರಿ, ಹಣ್ಣು-ಹಂಪಲು ವ್ಯಾಪಾರಿಗಳು ಲಾಕ್ ಡೌನ್ ನೆಪ ಇಟ್ಟುಕೊಂಡು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವ ಬಗ್ಗೆ ಎರಡು ದಿನಗಳ ಹಿಂದೆ ‘ರಿಪೋರ್ಟರ್ ಕರ್ನಾಟಕ’ ವರದಿ ಮಾಡಿತ್ತು. ವ್ಯಾಪಕವಾಗಿ ಚರ್ಚೆಗೆ ಒಳಗಾದ ಈ ವಿಷಯ ಜಿಲ್ಲಾಡಳಿತದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು