6:25 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್

04/12/2021, 14:50

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ.

ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇಳಲಾಗಿತ್ತು. ಶನಿವಾರ ಮಧ್ಯಾಹ್ನ ಮಿದುಳು ಕೆಲಸ ಮಾಡುವುದು ನಿಲ್ಲಿಸಿದೆ ಎಂದು ವರದಿಯಾಗಿತ್ತು. ಬಳಿಕ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಘೋಷಿಸಿದೆ.

ಇತ್ತೀಚಿಗೆ ಕಾರಿನಲ್ಲಿ ಶಿವರಾಂ ಹೊರಗೆ ಹೋಗಿದ್ದರು. ಆ ವೇಳೆ ಅಪಘಾತ ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಯಾವುದೇ ಸಮಸ್ಯೆಗಳೂ ಪತ್ತೆಯಾಗಿರಲಿಲ್ಲ.

ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನಡೆಸಲಾಗಿದ್ದು, ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು