4:17 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ  ಹಾಗೂ ಬೃಹತ್ ಶೋಭಾಯಾತ್ರೆ

04/12/2021, 16:31

ಕಾರ್ಕಳ(reporterkarnataka.com):
ಕಾರ್ಕಳದ ಗಾಂಧಿ ಮೈದಾನದಲ್ಲಿ  ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. 

ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತಿಯ ಅಂಗವಾಗಿ ಡಿ.12ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಹಿಂದೂ ಸಂಗಮದಲ್ಲಿ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ಸೇರುವ ನಿರೀಕ್ಷೆಯಿದೆ. ಸ್ವರಾಜ್ಯ ಮೈದಾನದಿಂದ ಗಾಂಧಿ ಮೈದಾನದವರೆಗೆ ಭಜನಾ ತಂಡ, ವಿವಿಧ ಟ್ಯಾಬ್ಲೋಗಳೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು

ಸಭೆಯನ್ನು ಉದ್ದೇಶಿಸಿ ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿದ್ದು, ಪೇಜಾವರ ಸ್ವಾಮೀಜಿಯವರು ಹಾಗೂ ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಮತ್ತು ಜಾಗೃತಿಗಾಗಿ,  ಪೂರ್ವಭಾವಿಯಾಗಿ ಧರ್ಮರಕ್ಷ ರಥ ತಾಲೂಕಿನಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸುತ್ತಿದ್ದು, ಡಿ 5ರಂದು ಕಾರ್ಕಳ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಸುನಿಲ್ ಕೆ.ಆರ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಹಿಂದೂ ಭಾಂಧವರು ಭಾಗವಹಿಸಿ ಹಿಂದೂ ಸಮಾಜದಲ್ಲಿ ವಿಶ್ವಾಸವನ್ನು ತುಂಬಿಸುವ ಕೆಲಸ ಮತ್ತು ಜಾಗೃತ, ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣವಾಗುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿ ಸುಧೀರ್ ನಿಟ್ಟೆ, ಕಾರ್ಕಳ ಬಜರಂಗದಳ ಸಂಚಾಲಕ ಚೇತನ್ ಪೇರಾಲ್ಕೆ, ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಹರಿಪ್ರಸಾದ್ ಶೆಟ್ಟಿ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು