4:40 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಂಟ್ವಾಳ ವೆಂಕಟರಮಣ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನೆ

04/12/2021, 21:54

ವರದಿ/ಚಿತ್ರ :ಅನುಷ್ ಪಂಡಿತ್ ಮಂಗಳೂರು
ಬಂಟ್ವಾಳ(reporterkarnataka.com):
ಬಂಟ್ವಾಳ ವೆಂಕಟರಮಣ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಲಾಂಛನ ಚಕ್ರದಂತೆ  ನಿರಂತರವಾಗಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು  ಹಾಗೂ ಸಾಮಾಜಮುಖಿಯಾಗಿ ಬೆಳೆಯಲು ರಾ. ಸೆ. ಯೋ ಉತ್ತಮ  ವೇದಿಕೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸುಯೋಗ ವರ್ಧನ್ ಮಾತನಾಡಿ, ರಾ.ಸೆ.ಯೋ ವಿಶೇಷ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಾಸನಕ್ಕೆ  ನಾಂದಿಯಾಗುತ್ತದೆ.  ರಾ. ಸೆ.ಯೋ. ಸಮಾಜಕ್ಕೆ ಸಹಬಾಳ್ವೆಯನ್ನು  ಸಾರಿ  ಹೇಳುತ್ತದೆ ಎಂದರು.






ರಾ.ಸೆ.ಯೋ ಯೋಜನಾಧಿಕಾರಿಗಳಾದ ಡಾ.ವಿನಾಯಕ ಕೆ.ಎಸ್., ಸುಪ್ರೀತ್ ಕಡಕೋಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು