10:33 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ

07/12/2021, 09:31

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com

ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್‍ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು.

ತಾಲೂಕಿನ ನಾಯಕನ ಹಟ್ಟಿ ಪಟ್ಟಣದ ಆಟೋ ಮತ್ತು ಲಘು ಸರಕು ಸೇವೆ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಟೋ ಚಾಲಕರು ಮತ್ತು ಸರಕು ಸೇವಾ ವಾಹನಗಳ ಚಾಲಕರು, ಲಘು ವಾಹನಗಳ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಿಗೆ ಹೊಂದಿರಬೇಕು. ತಮ್ಮ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಎಲ್ಲಿಯಾದರೂ ರಸ್ತೆ ಮಧ್ಯೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ತಾವುಗಳು ಅಫಘಾತಕ್ಕೀಡದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಮುಂದಾಗಬೇಕು. ಜೊತೆಗೆ ತಮ್ಮೆದುರಿಗೆ ಯಾವುದಾದರೂ ಅಪರಾಧಿ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬಂದರೆ ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು. ಹಾಗೂ ಯಾರಾದರೂ ಅಪರಾಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ, ಅಂಥವರ ಬಗ್ಗೆ ಸುಳಿವು ಕೊಡಬೇಕು. ತಮ್ಮ ವಾಹನಗಳನ್ನು ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಬಳಸಬಾರದು. ಚಾಲಕರು ವಾಹನವನ್ನು ಚಲಾಯಿಸುವಾಗ ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಬಾರದು. ವಾಹನ ಚಾಲನೆಯಲ್ಲಿ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪೊಲೀಸರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಬೇಕು. ಇದರಿಂದ ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಕೃತ್ಯಗಳನ್ನು ತಡೆಯಲು ಸಹಕಾರಿಯಾಗುತ್ತದೆ ಎಂದು ವಾಹನ ಚಾಲಕರಿಗೆ ಕಿವಿಮಾತು ಹೇಳಿದರು.

ಇದೇವೇಳೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರೊಂದಿಗೆ ಅಪರಾಧಿ ತಡೆ ಮಾಸಾಚರಣೆಯ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು. ಸಿಬ್ಬಂದಿಗಳಾದ ಚನ್ನಕೇಶವ, ಜಗ ರೆಡ್ಡಿ, ಮಂಜುನಾಥ್, ಪ್ರದೀಪ್, ಕರಿಬಸಪ್ಪ, ಗ್ರಾಮಸ್ಥರಾದ ದಾದಪೀರ್, ಮುತ್ತಯ್ಯ, ಪ್ರಹ್ಲಾದ್ ಇದ್ದರು.

ಚಳ್ಳಕೆರೆ ತಾಲೂಕಿನ  ನಾಯಕನಹಟ್ಟಿ ಪಟ್ಟಣದಲ್ಲಿ ಆಟೋ ಮತ್ತು ಲಘು ಸರಕು ಸೇವಾ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಪೊಲೀಸ್ ಇಲಾಖೆಯು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು