10:21 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ

01/06/2021, 14:37

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.

ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇರುವ

ಕಾರಣ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿದೆ.

 ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿತ್ತು. ಹೀಗಾಗಿ ಲಾಕ್ ಡೌನ್ ಭವಿಷ್ಯ ಸದ್ಯ ಸಿಎಂ ಯಡಿಯೂರಪ್ಪ ಅಂಗಳದಲ್ಲಿದ್ದು, ಜೂನ್ 6 ರಂದು ಸಭೆ ನಡೆಸಿ ಸಿಎಂ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು