ಇತ್ತೀಚಿನ ಸುದ್ದಿ
ದೆಹಲಿಯಲ್ಲಿ ಜನರಲ್ ರಾವತ್ ಅಂತ್ಯಕ್ರಿಯೆ: ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರ ರವಾನೆ
09/12/2021, 11:23
ಹೊಸದಿಲ್ಲಿ(reporterkarnataka.com): ತಮಿಳುನಾಡಿನಲ್ಲಿ ನಡೆದ ಸೇನಾ ಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಎಲ್ಲ 13 ಮಂದಿಯ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಇಂದು ದೆಹಲಿಗೆ ಕೊಂಡೊಯ್ಯಲಾಗುವುದು. ದಿಲ್ಲಿಯಲ್ಲೇ ಅಂತ್ಯ ಸಂಸ್ಕಾರ ನಡೆಯಲಿದೆ.
ಊಟಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ರಾವತ್ , ಅವರ ಪತ್ನಿ ಮಧುಲಿಮಾ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಎಲ್ಲರೂ ಸೇನಾ ಅಧಿಕಾರಿಗಳಾಗಿದ್ದಾರೆ.