4:16 PM Thursday27 - November 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟ; ಶಿಕ್ಷಕರು ಸೇರಿ 11 ವಿದ್ಯಾರ್ಥಿಗಳಿಗೆ ಸೋಂಕು

11/12/2021, 12:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ.ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ  ಶಿಕ್ಷಕ ಸೇರಿ, 11 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಶಾಲೆಯನ್ನು ಒಂದು ವಾರ ಸೀಲ್ ಡೌನ್ ಮಾಡಲಾಗಿದೆ.

ಜೀವನ್ ಜ್ಯೋತಿ ಖಾಸಗಿ ಶಾಲೆಯ ಓರ್ವ ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 11 ಜನರಿಗೆ ಕೊರೊನಾ ಪಾಸಿಟಿವ್ ಸೋಂಕು ಬಾಧಿಸಿದೆ. ಶಾಲೆಯನ್ನುಒಂದು ವಾರಗಳ ಕಾಲ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ವಾರದ ಹಿಂದೆ ನವೋದಯ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕುಕಾಣಿಸಿಕೊಂಡಿತ್ತು.ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಹಬ್ಬಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು