2:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿಎಸ್ ಆರ್ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

11/12/2021, 13:15

ಬೆಂಗಳೂರು(reporterkarnataka.com): ಸಿಎಸ್ ಆರ್ ನಿಧಿ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಹೇಳಿದರು.

ಅವರು ಬೆಂಗಳೂರು ಸಿಎಸ್ಆರ್ ಲೀಡರ್ ಶಿಪ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಕೊಡುವುದು ನಮ್ಮ ಸಂಸ್ಕೃತಿ. ಆದರೆ ಎಲ್ಲಿ, ಹೇಗೆ ಹಾಗೂ ಏನನ್ನು ಕೊಡುವುದು ಎನ್ನುವುದು ಮುಖ್ಯವಾಗುತ್ತದೆ. ತಾವು ಮಾಡಿದ ಒಳ್ಳೆಯ ಕೆಲಸದಿಂದ ಆಗುವ ಪ್ರಯೋಜನದ ಬಗ್ಗೆ ಯೋಚಿಸಿದಾಗ ಸಂತೋಷವಾಗುವುದಲ್ಲದೆ ಇನ್ನಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದರು.

ದಾನದ ಉದ್ದೇಶ ನಮಗೆ ತಿಳಿದಿರಬೇಕು. ಅದು ನಮ್ಮನ್ನು ನಮ್ಮ ಗುರಿಯತ್ತ ಒಯ್ಯಬೇಕು. ಸಹಾಯ ಪಡೆಯುವವರಿಗಿಂತ ಸಹಾಯ ಮಾಡಿದವರ ಬಗ್ಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದರು.

ಸಿಎಸ್ ಆರ್ ಕೇವಲ ಆರ್ಥಿಕ ನೆರವು ಮಾತ್ರವಲ್ಲ ಒಳ್ಳೆಯ ಕೃತ್ಯ ಹಾಗೂ ವ್ಯಕ್ತಿತ್ವವನ್ನೂ ನಿರ್ಮಾಣ ಮಾಡುತ್ತದೆ. ಜನರಲ್ಲಿ ಒಳ್ಳೆಯ ವ್ಯಕ್ತಿತ್ವದ ನಿರ್ಮಾಣದಿಂದ ಉತ್ತಮ ರಾಷ್ಟ್ರ ನಿರ್ಮಾಣವಾಗುತ್ತದೆ. ಈಗಿನ ಆಧುನಿಕ ಯುಗದಲ್ಲಿ ಹೊಸ ಸವಾಲುಗಳಿಗೆ ಹೊಸ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ. ನಮ್ಮ ಹಿರಿಯರಲ್ಲಿದ್ದಂತೆ ನಮ್ಮಲ್ಲಿರುವ ನೀತಿ ಹಾಗೂ ಮೌಲ್ಯಗಳು ಉತ್ತಮವಾದುದ್ದಾಗಿದೆ ಎದು ಎಂದರು.

ವ್ಯಕಿಯೊಬ್ಬ ಮೊದಲು ತನ್ನ ಕುಟುಂಬದವರಿಗೆ ಸಹಾಯ ಮಾಡಬೇಕು. ಆ ನಂತರವೇ ಅವರು ಮತ್ತೊಬ್ಬರಿಗೆ ನೆರವು ನೀಡಲು ಸಾಧ್ಯವಾಗುವುದು. ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿ ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂತಿರುಗಿಸಬೇಕು. ಹಣವನ್ನೇ ಕೊಡಬೇಕು ಎಂದಿಲ್ಲ. ಮಾನವೀಯ ವರ್ತನೆಯಿಂದ ಮಾನವ ಶಕ್ತಿಯನ್ನು ವೃದ್ಧಿಸಿ ಅಭಿವೃದ್ಧಿಯನ್ನು ಕೈಗೊಳ್ಳಬೇಕು ಎಂದರು.

ಭವಿಷ್ಯಕ್ಕಾಗಿ ಮಾಡುವ ಹೂಡಿಕೆ: ಜನಪ್ರಿಯ ಯೋಜನೆಗಳಾದ ಮಧ್ಯಾಹ್ನದ ಬಿಸಿಯೂಟ, ಪೌಷ್ಟಿಕ ಆಹಾರ, ಸಮವಸ್ತ್ರ, ಸೈಕಲ್ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ‘ವ್ಯರ್ಥ ವೆಚ್ಚ’ ಎಂದು ವ್ಯಾಖ್ಯಾನಿಸಿದ ಆರ್ಥಿಕ ತಜ್ಞರಿದ್ದಾರೆ. ಆದರೆ ಇದು ಹೂಡಿಕೆ ಎಂದು ಭಾವಿಸಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

ಮಕ್ಕಳು ಭವಿಷ್ಯದ ನಾಗರಿಕರು. ಅವರು ಸ್ವಸ್ಥವಾಗಿಲ್ಲದಿದ್ದರೆ ಈ ದೇಶಕ್ಕೆ ಭವಿಷ್ಯವಿಲ್ಲ. ಮಕ್ಕಳು ಬೆಳೆಯಲು ನಾವು ನೆರವಾಗಬೇಕು. ಅನಾರೋಗ್ಯ ಪೀಡಿತ ಮಗು ದೇಶದ ಬೆಳೆವಣಿಗೆಗೆ ವೇಗ ನಿಯಂತ್ರಕವಿದ್ದಂತೆ. ಆರೋಗ್ಯವಂತ ಮಗು ಅಭಿವೃದ್ಧಿಗೆ ಏಣಿ ಇದ್ದಂತೆ ಎಂದು ಅಭಿಪ್ರಾಯ ಪಟ್ಟರು.

ಮಹಿಳೆಯರಿಗೆ ಆರ್ಥಿಕ ನೆರವು ನೀಡಿ ಬಡ ಮಹಿಳೆಯರೂ ಸುಸ್ಥಿರ ಜೀವನ ನಡೆಸುವುದಲ್ಲದೆ, ರಾಜ್ಯದ ಜಿಡಿಪಿಗೆ ಕೊಡುಗೆ ನೀಡುವಂತವಾಗಬೇಕು. ಈ ಯೋಜನೆ ರಾಷ್ಟದ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವಾಗಲಿದೆ ಎಂದು ಸಿಎಂ ಹೇಳಿದರು.

ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು