3:14 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ತಾಯಿ-ಮಗು ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ

12/12/2021, 13:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ.


ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ನಿವಾಸಿ ಶ್ವೇತಾ (27) ಮೃತ ದುರ್ದೈವಿ. ವೈದ್ಯ ಎಲ್ಡೋಸ್ ಅವರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇವರು ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದ ವೈದ್ಯರು ಎನ್ನಲಾಗಿದೆ.


ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಅಷ್ಟರಲ್ಲಿ ವೈದ್ಯರು ನಾನೇ ಹೆರಿಗೆ ಮಾಡಿಸುತ್ತೇನೆಂದು ತಡೆದರು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ತಾಯಿ-ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.


ವೈದ್ಯರ ವಿರುದ್ಧ ಆಸ್ಪತ್ರೆ ಮುಂಭಾಗ ಸ್ಥಳಿಯರ ಪ್ರತಿಭಟನೆ ನಡೆಸಿದ್ದಾರೆ.


ಆಸ್ಪತ್ರೆಗೆ ಮುತ್ತಿಗೆ ಹಾಕಲು ಸ್ಥಳಿಯರು ಯತ್ನಿಸಿದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು