3:11 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ

13/12/2021, 16:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.conlm 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭಿಸಿದರು. ತಮ್ಮ ಸಾಮಾನ್ಯ ಪೆರೇಡ್ ಗಳನ್ನು ಪ್ರಸ್ತುತಪಡಿಸಿದರು ಹಾಗೂ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು.

ಸಸಂಪಪೂ ಕಾಲೇಜ್ ಮುಖ್ಯೋಪಾಧ್ಯಾಯ ಮಾರಪ್ಪ, ಗೃಹರಕ್ಷಕ ದಳದ ಪಥ ಸಂಚಲನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಗೃಹ ರಕ್ಷಕ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗಿಯ‍ಾಗಿದ್ದರು. ತಮ್ಮ ಆಕರ್ಷಕ ಪಥ ಸಂಚಲನ  ನಡೆಸಿದ ಗೃಹರಕ್ಷಕರು, ದಿನಾಚರಣೆ ಪ್ರಯುಕ್ತ ಪಟ್ಟಣದ ಪ್ರಮುಖ ವೃತ್ತ ಹಾಗೂ ರಸ್ಥೆಗಳಲ್ಲಿ ಸಂಚರಿಸಿದರು, ಈ ಮೂಲಕ ದಿನಾಚರಣೆಯ ಉತ್ಸಾಹವನ್ನು  ಹಾಗೂ ಸಂತೋಷವನ್ನು ನಾಗರೀಕರಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು