1:36 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ವೀರವೆಂಕಟೇಶ ದೇವರ ಪಾಕ ಶಾಲೆ ನವೀಕೃತ ‘ಅನ್ನಪೂರ್ಣೆ’ ಉದ್ಘಾಟನೆ        

13/12/2021, 20:26

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಿತು.

ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ ಮೊಕ್ಕಾಂ ನಿಂದ ಆಗಮಿಸಿದ್ದು, ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರಾರ್ಥನೆ ನಡೆದು ಪ್ರಸಾದ ನೀಡಿದರು. ನಂತರ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ )ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು