5:47 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ

15/12/2021, 08:13

ಮಂಗಳೂರು(reporterkarnataka.com): 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ.

ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,860 ರೂ . ಮೌಲ್ಯದ 24 ಕ್ಯಾರೆಟ್‌ನ 338 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಆರೋಪಿ ಸ್ಟಿರಿಯೋ ಕೇಬಲ್ , ಬರ್ನರ್ ಸ್ಟ್ಯಾಂಡ್ , ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್‌ಗಳಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು