ಇತ್ತೀಚಿನ ಸುದ್ದಿ
ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ
16/12/2021, 08:31
ಮಡಿಕೇರಿ(reporterkarnataka.com):
ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿ ರೈತರ ದಾಖಲೆಗಳು ಹಾಗೂ ಸೇವೆಯನ್ನು ಪರಿಶೀಲಿಸಿ ಪರಿಹಾರ ಕ್ರಮವಹಿಸಲು ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯಗಳು, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯಗಳು, ಆಹಾರ ಪಡಿತರ ಚೀಟಿಗೆ ಸಂಬಂಧಿಸಿದ ವಿಷಯಗಳು, ಪೋಡಿ, ಅಳತೆ ವಿಚಾರಕ್ಕೆ ಸಂಬಂಧಿಸಿದ ವಿಷಯಗಳು, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬಂಧಿಸಿದ ವಿಷಯಗಳು, ನಾಡಕಚೇರಿ, ಎಜೆಎಸ್ಕೆಪ ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಪರಿಹಾರ ವಿಚಾರಗಳು ಮತ್ತು ಗ್ರಾಮದ ಸಮಸ್ಯೆಗಳ ಇತರೆ ವಿಷಯಗಳ ಕುರಿತು ಅರ್ಜಿ ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಂತಿಮ ವಿಲೇವಾರಿ/ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು ಎಂದು ತಹಶೀಲ್ದಾರರಾದ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.