9:54 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ

16/12/2021, 09:56

ಮೈಸೂರು(reporterkarnataka.com):  ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ  ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಮುದ್ದಹಳ್ಳಿ ಗ್ರಾಮದ ರಾಜೇಶ್ ಕೊಲೆ ಮಾಡಿದ ಆರೋಪಿಯಾಗಿದ್ದು, ನದಿಯಲ್ಲಿ ಮುಳುಗಿಸಿ ಸಾಯಿಸಲು ಮುಂದಾದ ವೇಳೆ ಮೀನುಗಾರರು ತಡೆದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಗ್ರಾಮದಿಂದ ನಂಜನಗೂಡು ಪಟ್ಟಣದ ಸ್ಕ್ಯಾನಿಂಗ್ ಸೆಂಟರ್ ಗೆ ಆರೋಪಿ ರಾಜೇಶ್, ಪತ್ನಿ ದೇವಿ ಮತ್ತು ಮಕ್ಕಳು ಆಗಮಿಸಿದ್ದರು.

ಈ ವೇಳೆ ದೇವಾಲಯಕ್ಕೆ ಹೋಗೋಣ ಬಾ ಎಂದು ಕರೆದೊಯ್ದು, ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಪಿಲಾ ನದಿಗೆ ತಳ್ಳಿ ಕೊಲೆಗೈದಿದ್ದಾನೆ ಎನ್ನಲಾಗಿದೆ. 

 ಘಟನೆ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು