1:14 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಗಾಂಧಿ ನಗರ ಶಾಲೆ ಲಸಿಕಾ ಕೇಂದ್ರಕ್ಕೆ ಶಾಸಕ ಹಾಗೂ ಎಡಿಸಿ ಭೇಟಿ: ಪರಿಶೀಲನೆ

02/06/2021, 06:46

ಮಂಗಳೂರು(reporterkarnataka news): ಲೇಡಿಹಿಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರ ಗಾಂಧಿನಗರ ಶಾಲೆಯಲ್ಲಿ ನಡೆಯುತ್ತಿದ್ದು,

ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ನಮ್ಮ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಕೊಡಿಸುತ್ತೇವೆ. ಅನಗತ್ಯ ವದಂತಿಗಳಿಗೆ ಕಿವಿಗೊಡಗೆ ಜನತೆ ಸಹಕರಿಸಬೇಕು ಎಂದು ಹೇಳಿದರು.

ಲಸಿಕಾ ಕೇಂದ್ರಗಳ ವ್ಯವಸ್ಥೆಯಲ್ಲಿ ಒಂದಷ್ಟು ಬದಲಾವಣೆಗಳನ್ನು ತರಬೇಕಿದೆ. ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.‌ ಈಗಾಗಲೇ ಕೆಲವೊಂದು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು‌ ಶಾಸಕ ವೇದವ್ಯಾಸ್ ಕಾಮತ್ ನುಡಿದರು. 

ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ಜಯಲಕ್ಷ್ಮಿ ಶೆಟ್ಟಿ, ಸಂಧ್ಯಾ ಮೋಹನ್ ಆಚಾರ್, ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು