5:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ವೆನ್‍ಲಾಕ್‍ಗೆ ದಾಖಲು; ಜಿಲ್ಲಾಧಿಕಾರಿ ತುರ್ತು ಸಭೆ

17/12/2021, 22:54

 

ಮಂಗಳೂರು (reporterkarnataka.com): ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.

ಅವರು ಶುಕ್ರವಾರ ಮಧ್ಯಾಹ್ನ ಏರ್ ಪೋರ್ಟ್ ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರ್ಯಾಂಡಮೈಸ್ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರಿಯೇಶನ್, ಏರ್‍ ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.   

ಸಭೆಯಲ್ಲಿ ಚೀಫ್ ಏರ್‍ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್‍ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು