9:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಕೇಂದ್ರ ಸರಕಾರ ಕೈಬಿಡಲಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ

18/12/2021, 09:55

ಮಂಗಳೂರು(reporterkarnataka.com):

ಪಶ್ಚಿಮಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅರಣ್ಯ ಸಚಿವನಾಗಿದ್ದಾಗ ಕೇಂದ್ರದಲ್ಲಿದ್ದ ಎನ್‌ಡಿಎ ಸರಕಾರ ಕಸ್ತೂರಿ ರಂಗನ್ ವರದಿಯ ಕರಡು ಪ್ರತಿ ಸಿದ್ಧಪಡಿಸಿತ್ತು. ಇದನ್ನು ಜಾರಿಗೊಳಿಸಿದರೆ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ವಾಸಿಸುವ ಅನೇಕ ಕುಟುಂಬಗಳಿಗೆ ತೊಂದರೆಯಾಗುತ್ತದೆ ಎಂಬ ದೂರುಗಳು ಕೇಳಿ ಬಂತು. ಆಗ ಪ್ರತಿಪಕ್ಷ ಬಿಜೆಪಿ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಜನತೆಯನ್ನು ಬೀದಿಗಿಳಿದು ಪ್ರತಿಭಟಿಸುವಂತೆ ಕುಮ್ಮಕ್ಕು ನೀಡಿತ್ತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟದಲ್ಲಿ ಹಾಲಿ

ಇರುವ ಸೂಕ್ಷ್ಮ ಪ್ರದೇಶ, ಅಭಯಾರಣ್ಯಗಳನ್ನು ಮಾತ್ರ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಡಿಸಿದರೆ ಸಾಕು, ಹೆಚ್ಚುವರಿ ವ್ಯಾಪ್ತಿ ವಿಸ್ತರಿಸದಂತೆ ಕೇಂದ್ರ ಸರಕಾರಕ್ಕೆ ರಾಜ್ಯದಿಂದ ಶಿಫಾರಸು ಮಾಡಲಾಗಿತ್ತು. ಆದರೆ ಅದೇ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿ ಅದನ್ನು ಪರಿಷ್ಕರಿಸುವಂತೆ ರಾಜ್ಯಕ್ಕೆ ವಾಪಸ್ ಕಳುಹಿಸಿತ್ತು. ಪ್ರತಿ ಬಾರಿಯೂ ರಾಜ್ಯ ಸರಕಾರ ಅದೇ ವರದಿಯನ್ನು ಕೇಂದ್ರಕ್ಕೆ ಕಳುಹಿಸುವುದು, ಕೇಂದ್ರ ವಾಪಸ್ ಕಳುಹಿಸುವುದು ನಡೆಯುತ್ತಲೇ ಇದೆ ಎಂದು ಅವರು ಹೇಳಿದರು.

ಈಗ ಕಸ್ತೂರಿ ರಂಗನ್ ವರದಿ ಬಗ್ಗೆ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವರದಿಯನ್ನು ರದ್ದುಪಡಿಸುವ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದು, ಪಶ್ಚಿಮ ಘಟ್ಟ ತಪ್ಪಲಿನ ಜನತೆಯ ಬಗ್ಗೆ ನಿಜವಾಗಿ ಕಾಳಜಿ ಇದ್ದರೆ ಬಿಜೆಪಿ ಮುಖಂಡರು ಈ ಯೋಜನೆ ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಲಿ. ಇಲ್ಲದಿದ್ದರೆ ಕಸ್ತೂರಿ ರಂಗನ್ ವರದಿ ವಿಚಾರ ರಾಷ್ಟ್ರೀಯ ಪರಿಸರ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದು, ಮತ್ತೆ ಅಲ್ಲಿಂದ ಅನುಮತಿ ಪಡೆದು ರದ್ದುಗೊಳಿಸಬೇಕಾಗುತ್ತದೆ. ಹಾಗಾಗಿ ಬಿಜೆಪಿಗರು ಬಾಯಿಮಾತಿನಲ್ಲಿ ವಿರೋಧ ಬದಲು ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡುವಂತೆ ಕೇಂದ್ರವನ್ನು ಒತ್ತಾಯಿಸಲಿ ಎಂದರು.

ಮುಖಂಡರಾದ ಜಿ.ಎ.ಬಾವಾ, ಕೋಡಿಜಾಲು ಇಬ್ರಾಹಿಂ, ಶಾಹುಲ್ ಹಮೀದ್, ಶಶಿಧರ ಹೆಗ್ಡೆ, ನವೀನ್ ಡಿಸೋಜ, ಪ್ರಕಾಶ್ ಸಾಲಿಯಾನ್, ಸಬಿತಾ ಮಿಸ್ಕಿತ್, ಎಂ.ಎಸ್.ಸಲೀಂ,

ಅಬ್ದುಲ್ ರವೂಫ್, ಅಶ್ರಫ್, ನೀರಜ್‌ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು