3:38 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಐತಿಹಾಸಿಕ ಗುಜ್ಜರಕೆರೆ ಅತಿಕ್ರಮಣ ತೆರವಿಗೆ ಶೀಘ್ರದಲ್ಲೇ ಸರ್ವೆ: ಮೇಯರ್ ಪ್ರೇಮಾನಂದ ಶೆಟ್ಟಿ ಭರವಸೆ

02/06/2021, 06:52

ಮಂಗಳೂರು(reporterkarnataka news): ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಗುಜ್ಜರಕೆರೆ ಅಭಿವೃದ್ಧಿ  ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಡೆಸಿದರು.

ಈ ಸಂದರ್ಭ ಕೆರೆಯ ಭೂ ಅತಿಕ್ರಮಣ, ಕೆರೆಯ ಸುತ್ತಲು ಅಗತ್ಯಕ್ಕಿಂತ ಅಗಲ ಮಣ್ಣು ಹಾಕಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿರುವ ಕುರಿತು ಸ್ಥಳೀಯರು ಮೇಯರ್  ಗಮನಕ್ಕೆ ತಂದರು. ಈ ಬಗ್ಗೆ ಎಂಜಿನಿಯರ್ ಅವರಿಂದ ಮಾಹಿತಿ ಪಡೆದ ಮೇಯರ್ ಅವರು  ಆದಷ್ಟು ಶೀಘ್ರದಲ್ಲಿ ಕೆರೆಯ ಜಮೀನು ಸರ್ವೇ ಕಾರ್ಯ ನಡೆಸುವ ಕುರಿತಾಗಿ ಸ್ಥಳೀಯರಿಗೆ ಭರವಸೆ ನೀಡಿದರು.

ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಭಾನುಮತಿ ಪಿ.ಎಸ್. , ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಕುಮಾರ್ ಜೆಪ್ಪು, ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್ಜರಕೆರೆ ಹಾಗೂ ಸ್ಥಳೀಯರಾದ  ಮಾಧವ ಗುಜ್ಜರಕೆರೆ ,  ಉದಯ ಶಂಕರ್ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು