6:49 AM Thursday31 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ಹೊಸ ವರ್ಷ ಬಹಿರಂಗ ಆಚರಣೆಗಿಲ್ಲ ಅವಕಾಶ: ಸರಕಾರದಿಂದ ಮಾರ್ಗಸೂಚಿ ಪ್ರಕಟ

21/12/2021, 23:51

ಬೆಳಗಾವಿ(reporterkarnataka.com) : ಈ ಬಾರಿಯ ಹೊಸ ವರ್ಷಾಚರಣೆಗೆ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಕಾರ್ಯಕ್ರಮಕ್ಕೆ ಅವಕಾಶ ನೀಡಿಲ್ಲ.

ಹೊಸ ವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು.

ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ತಿಳಿಸಿದ್ದಾರೆ.

ಹೊಸವರ್ಷದ ಸಂಭ್ರಮಾಚರಣೆಗೆ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಬಹಿರಂಗ ಪಾರ್ಟಿಗಳಿಗೆ ಅವಕಾಶ ಇಲ್ಲ. ಚರ್ಚ್ ಒಳಗೆ ಪ್ರಾರ್ಥನೆ ಮಾಡುವುದ್ದಕ್ಕೆ ಯಾವುದೇ ತೊಂದರೆ ಇಲ್ಲ, ಸಾಮಾಜಿಕ ಅಂತರ ಪಾಲಿಸಬೇಕು ಎಂದರು.

ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರ ವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಭೆ ಮಾಡಿದ ಪ್ರಮುಖವಾದ ಉದ್ದೇಶ ಓಮಿಕ್ರಾನ್ ಮತ್ತು ಕೋವಿಡ್ ತಡೆಗಟ್ಟುವುದಾಗಿದೆ. ತಜ್ಞರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ, ಕೆಲವು ಕ್ರಮಗಳ ಕುರಿತು ಶಿಫಾರಸ್ಸು ಮಾಡಿದ್ದಾರೆ. ಎಂಜಿ ರೋಡ್, ಬ್ರಿಗೇಡ್ ರೋಡ್ ನಲ್ಲಿ ಬಹಿರಂಗ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಲಾಗಿದೆ. ಕ್ಲಬ್ ಗಳು, ರೆಸ್ಟೋರೆಂಟ್ ಗಳಲ್ಲಿ ವಿಶೇಷ ಇವೆಂಟ್ ಮಾಡುವ ಹಾಗೆ ಇಲ್ಲ. ಕ್ಲಬ್ ಗಳಲ್ಲಿ ಸಾಮರ್ಥ್ಯದ 50 % ಗೆ ಮಾತ್ರ ಅವಕಾಶ ಇದೆ. ಅಪಾರ್ಟ್ಮೆಂಟ್ ಗಳಲ್ಲೂ ಬಹಿರಂಗ ಆಚರಣೆಗೆ ಅವಕಾಶ ಇಲ್ಲ. ಎಲ್ಲಾ ಕ್ರಮಗಳನ್ನು ಅಪಾರ್ಟ್ಮೆಂಟ್ ಅಸೋಸಿಯೇಷನ್ ನವರೇ ಮಾಡಬೇಕು. ರಾಜ್ಯಾದ್ಯಂತ ಡಿ. 30 ರಿಂದ 2 ನೇ ಜನವರಿಗೆ ಮಾರ್ಗಸೂಚಿಗಳು ಅನ್ವಯವಾಗಲಿದೆ ಎಂದರು.

ಕ್ಲಬ್ ಗಳಲ್ಲಿ ಸಿಬ್ಬಂದಿಗೆ ಆರ್ ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ, ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಹಾಕಿಸಿರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು