2:54 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ತವರಿಗೆ ಕಳುಹಿಸಲು ಒಲ್ಲೆ ಎಂದ ಪತಿ:ನೊಂದ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

22/12/2021, 11:08

ಮೈಸೂರು(reporterkarnataka.com):

ತವರು ಮನೆಗೆ ಕಳಿಸಲು ಗಂಡ ಒಪ್ಪಿಲ್ಲವೆಂದು ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ರಾಘವೇಂದ್ರನಗರ ಬಡಾವಣೆಯಲ್ಲಿ ನಡೆದಿದೆ.

ಅರ್ಪಿತಾ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಈಕೆ ಎರಡು ವರ್ಷಗಳ ಹಿಂದೆ ಗಾರೆ ಕೆಲಸ ಮಾಡುವ ಜಗದೀಶ್ ಎಂಬಾತನನ್ನು ವಿವಾಹವಾಗಿದ್ದು, ಒಂದು ಮಗುವಿದೆ.

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು, ತವರು ಮನೆಗೆ ಹೋಗುವುದಾಗಿ ಅರ್ಪಿತಾ ಕೇಳಿದ್ದು, ಆಕೆಯನ್ನು ಕಳುಹಿಸಿಕೊಡಲು ಜಗದೀಶ್ ನಿರಾಕರಿಸಿದ್ದಾನೆ. ಇದರಿಂದ ಬೇಸರಗೊಂಡ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ನಜರಬಾದ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು